ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

0

 

ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಂಘದ 2021-22 ನೇ ಸಾಲಿನ ಸಾಧನೆಗಾಗಿ ತಾಲೂಕಿನ ದ್ವಿತೀಯ ಅತ್ಯುತ್ತಮ ಸಂಘ ಪ್ರಶಸ್ತಿ ಲಭಿಸಿದೆ. ಸೆ. 3ರಂದು ನಡೆದ ಕೆಎಂಎಫ್ ನ ಮಹಾಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ, ಉಪಾಧ್ಯಕ್ಷರಾದ ಎಸ್.ಬಿ ಜಯರಾಮ ರೈ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಭರತ್ ನೆಕ್ರಾಜೆ, ಕಾರ್ಯದರ್ಶಿ ಶ್ರೀಮತಿ ಗೀತಾರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.