ಸುಳ್ಯ : ಹಲ್ಲೆಗೊಳಗಾದ ವಿದ್ಯಾರ್ಥಿ ಸಾನಿಫ್ ಮನೆಗೆ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಭೇಟಿ

0

 

ಸಹ ವಿದ್ಯಾರ್ಥಿಗಳಿಂದ ಗುಂಪು ಹಲ್ಲೆಗೊಳಗಾಗಿ ಗಾಯಗೊಂಡು ಚಿಕಿತ್ಸೆಯಲ್ಲಿರುವ ಸುಳ್ಯ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಪೈಚಾರಿನ ಸಾನಿಫ್ ಮನೆಗೆ ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಮತ್ತು ಸುಳ್ಯದ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಮನೆಗೆ ಭೇಟಿ ನೀಡಿದ ಮುಖಂಡರಲ್ಲಿ ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಯೂತ್ ಕಾಂಗ್ರೆಸ್ ಸುಳ್ಯ ತಾಲೂಕು ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಉಪಾಧ್ಯಕ್ಷ ರಂಜಿತ್ ರೈ ಮೇನಾಲ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಮುಜೀಬ್ ಪೈಚಾರ್ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿ ಸಾನಿಫ್ ರವರಿಂದ ಘಟನೆಯ ಬಗ್ಗೆ ವಿವರವನ್ನು ಪಡೆದುಕೊಂಡ ನಾಯಕರುಗಳು ಹಲ್ಲೆಗೊಳಗಾದ ಯುವಕನಿಗೆ ಮುಂದಿನ ದಿನಗಳಲ್ಲಿ ಸೂಕ್ತ ರಕ್ಷಣೆ ಮತ್ತು ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರೆಂದು ತಿಳಿದು ಬಂದಿದೆ.