ಕೊಲ್ಲಮೊಗ್ರು: ದಿ|ಚಂದ್ರಶೇಖರ ನಂಗಾರು ಅವರ ಸ್ಮರಣಾರ್ಥ ರಕ್ತದಾನ ಶಿಬಿರ

0

 

60 ಮಂದಿಯಿಂದ ರಕ್ತದಾನ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರು ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸೆ.3 ರಂದು ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ”ದಿ.ಚಂದ್ರಶೇಖರ ನಂಗಾರು ಅವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ” ವನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 60 ಮಂದಿ ರಕ್ತದಾನ ಮಾಡಿದರು. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಸಭಾಪತಿಯಾದ ಪಿ.ಬಿ. ಸುಧಾಕರ್ ರೈ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಹೇಮಂತ್ ದೋಲನ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಆಶೋಕ್ ಕುಮಾರ, ಕೊಲ್ಲಮೊಗ್ರ ಗ್ರಾ.ಪಂ ಅಧ್ಯಕ್ಷರಾದ ಉದಯ ಕೊಪ್ಪಡ್ಕ, ಅಮರ ತಾಲೂಕು ಚಾರಿಟೇಬಲ್ ಅಧ್ಯಕ್ಷರಾದ ಚಂದ್ರಶೇಖರ ಕಡೋಡಿ ವೇದಿಕೆಯಲ್ಲಿದ್ದರು.


ಹರಿಪ್ರಸಾದ್ ಮಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.ಪುಷ್ಪರಾಜ್ ಪಡ್ಪು ವಂದಿಸಿದರು. ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ನೆರೆ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆ ಟರ್ಪಾಲ್ ಮತ್ತು ರಕ್ತದಾನ ಆಯೋಜಿದ ಸಂಘಟನೆಗೆ ಮೂರು ಸಾವಿರ ರೂಪಾಯಿಯ ಚೆಕ್ ಹಸ್ತಾಂತರ ಮಾಡಲಾಯಿತು.