ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ಪ್ರಥಮ ಉತ್ತಮ ಸಂಘ ಪ್ರಶಸ್ತಿ

0

ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ತಾಲೂಕಿನ ಪ್ರಥಮ ಉತ್ತಮ ಸಂಘ ಪ್ರಶಸ್ತಿ ಲಭಿಸಿದೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಸಂಘ ಮಂಗಳೂರು ಇದರ ಮಹಾಸಭೆಯಲ್ಲಿ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ .ಬಿ. ಜಯರಾಮ ರೈ ಹಾಗೂ ಎಲ್ಲ ನಿರ್ದೇಶಕರುಗಳ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಕೆ., ಕಾರ್ಯದರ್ಶಿ ಮಾಧವ ಎರ್ಕ, ನಿರ್ದೇಶಕ ಜಗದೀಶ್ ಶೆಟ್ಟಿ ಕಿನ್ನಾಳ ಉಪಸ್ಥಿತರಿದ್ದರು.