ಕೆ.ವಿ.ಜಿ ಇಜಿನಿಯರಿಂಗ್ ಕಾಲೇಜಿನಿಂದ ವಿವಿಧ ಕಂಪೆನಿಗಳಿಗೆ ಆಯ್ಕೆ

0

ಕೆ.ವಿ.ಜಿ ಇಂಜಿನಿಯರಿಂಗ್ ಮಹಾವಿದ್ಯಾಲಯದ 2022 ನೇ ಸಾಲಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಪೂಜಾ ಡಿ.ಎಂ. Byju’s ಕಂಪೆನಿಗೆ, ಅವಿನಾಶ್ ರೈ Teachnook ಕಂಪೆನಿಗೆ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕೃತಿ ಎಸ್. Conceptia Software Technologies Pvt. Ltd. ಕಂಪೆನಿಗೆ ಆಯ್ಕೆಯಾಗಿರುತ್ತಾರೆ.


ಎ.ಒ.ಎಲ್.ಇ(ರಿ) ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್. ಮತ್ತು ಟ್ರೈನಿಂಗ್ ಪ್ಲೇಸ್‌ಮೆಂಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.