ಸುಳ್ಯ: ಹಲ್ಲೆಗೊಳಗಾದ ವಿದ್ಯಾರ್ಥಿ ಸಾನಿಫ್ ಮನೆಗೆ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಭೇಟಿ

0

ಕಾನೂನು ಪರ ಹೋರಾಟಕ್ಕೆ ಸಹಕಾರ ನೀಡುವ ಭರವಸೆ

ಸುಳ್ಯದ ಸರ್ಕಾರಿ ಕಾಲೇಜಿನಲ್ಲಿ ಸಹವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ ಪೈಚಾರಿನ ಸಾನಿಫ್ ಮನೆಗೆ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ನಿಯೋಗವು ಭೇಟಿ ನೀಡಿ ವಿದ್ಯಾರ್ಥಿ ಸಾನಿಫ್ ನ ಆರೋಗ್ಯವನ್ನು ವಿಚಾರಿಸಲಾಯಿತು. ಅದೇ ರೀತಿ ಪ್ರಕರಣದ ಬಗ್ಗೆ ಮಾಹಿತಿಯನ್ನು ಪಡೆದು ಮುಂದಿನ ದಿನಗಳಲ್ಲಿ ಸಾನಿಫ್ ಗೆ ಕಾನೂನು ಹೋರಾಟದಲ್ಲಿ ಸಹಕಾರ ನೀಡುವುದಾಗಿ,ಹಾಗೂ ಯಾವುದೇ ಆತಂಕವಿಲ್ಲದೆ ವಿದ್ಯಾಭ್ಯಾಸವನ್ನು ಮುಂದುವರೆಸುವಂತೆ ವಿದ್ಯಾರ್ಥಿಗೆ ಧೈರ್ಯ ತುಂಬಿರುವುದಾಗಿ ನಿಯೋಗದಲ್ಲಿ ಭಾಗಿಯಾದ ಮುಖಂಡರು ಸುದ್ದಿಗೆ ತಿಳಿಸಿದ್ದಾರೆ.

ನಿಯೋಗದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ಸಂಶುದ್ದೀನ್, ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯರಾದ ಕೆ.ಎಂ.ಮುಸ್ತಫಾ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ, ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕ, ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟಕ್ ಅಧ್ಯಕ್ಷರಾದ ಶಾಫಿ ಕುತ್ತಮೊಟ್ಟೆ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಮುಜೀಬ್ ಪೈಚಾರ್ ಈ ಸಂದರ್ಭ ಉಪಸ್ಥಿತರಿದ್ದರು.