ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್‌ಕೆ.ವಿ. ಯವರಿಗೆ ಸನ್ಮಾನ

0

ಬೆಳ್ತಂಗಡಿ ಗೌಡರಯಾನೆ ಒಕ್ಕಲಿಗರ ಸಂಘದ ವತಿಯಿಂದ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರೂ, ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಅವರನ್ನು ಸೆಪ್ಟೆಂಬರ್ 4 ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ಸನ್ಮಾನಿಸಲಾಯಿತು.


ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಡಾ. ರೇಣುಕಾ ಪ್ರಸಾದ್ ಕೆ.ವಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಒಕ್ಕಲಿಗರ ಸಮಾಜ ಸದಾಎಲ್ಲರನ್ನು ಗೌರವಿಸುವುದರೊಂದಿಗೆ ಸಮಾಜದ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಿಂದಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಸಹಕಾರಿಯಾಗುತ್ತದೆ. ರಾಜ್ಯ ಒಕ್ಕಲಿಗರ ಸಂಘದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಈ ಭಾಗದ ಸಮಾಜ ಭಾಂದವರಿಗೆ ಸಿಗುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ   ವಹಿಸಿದರು. ವೇದಿಕೆಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಲೋಕಯ್ಯ ಗೌಡ ಬೆಳ್ತಂಗಡಿ, ಗೌಡ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ, ಯುವ ಉದ್ಯಮಿಗಳಾದ ಗಣೇಶ್ ಕುಲಾಯಿ, ದಿವಿಜ ಗಣೇಶ್ ಗೌಡ, ಶ್ರೀಮತಿ ಸುಭಾಷಿಣಿ, ಸೀತಾರಾಮ ಕೆ., ಸುರೇಶ್ ಬಿ, ದಿನೇಶ್ ಗೌಡ, ಯಶವಂತ ಬಿ.ಟಿ. ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.