ಬೆಳ್ಳಾರೆಯಲ್ಲಿ ತಾಲೂಕು ಶಿಕ್ಷಕರ ದಿನಾಚರಣೆ

0

ಹಿರಿಯರ ಆದರ್ಶಗಳೇ ದಾರಿದೀಪ : ಸಚಿವ ಎಸ್.ಅಂಗಾರ

ಶಿಕ್ಷಣ ‌ವೃತ್ತಿ ಶ್ರೇಷ್ಠವಾದುದು. ಗೌರವವಿರಲಿ : ಡಾ.ಸಿ.ನಾಗಣ್ಣ

ಎಲ್ಲರೂ ಉನ್ನತ ಹುದ್ದೆಗೆ ಹೋಗಲು ಅವರಿಗೆ ಶಿಕ್ಷಣ ನೀಡಿದ ಶಿಕ್ಷಕನೇ ಕಾರಣ. ಅಂತಹ ಶಿಕ್ಷಕ ವೃತ್ತಿ ಶ್ರೇಷ್ಢವಾದುದು. ನಮ್ಮ ಶಿಕ್ಷಕ ವೃತ್ತಿಯ ಬಗ್ಗೆ ಗೌರವವಿರಲಿ ಎಂದು ಮೈಸೂರು ವಿವಿ ಸಂದರ್ಶಕ ಪ್ರಾಧ್ಯಾಪಕ ಡಾ.ಸಿ. ನಾಗಣ್ಣ ಹೇಳಿದರು.

ಸೆ.5 ರಂದು ಬೆಳ್ಳಾರೆ ಯಲ್ಲಿ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

“ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರು ಸಮಾಜಲ್ಲಿನ ಅಂದಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡಿದವರು. ಅವರಲ್ಲಿ ಕೀಳರಿಮೆಯೂ ಇರಲಿಲ್ಲ. ಮೇಳರಿಮೆಯೂ ಇರಲಿಲ್ಲ. ಅವರನ್ನು ಪ್ರತಿಯೊಬ್ಬ ಶಿಕ್ಷಕರೂ ಓದಬೇಕು.. ಅವರ ಬದುಕು ಪ್ರತಿಯೊಬ್ಬ ಶಿಕ್ಷಕರಿಗೂ ಆದರ್ಶವಾಗಬೇಕು ಎಂದ ಅವರು, ನಾವೆಲ್ಲ ಓದುವ ಕಲೆಯನ್ನು ರೂಡಿಸಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣವನ್ನು ನೀಡಿ ಹಲವು ದೀಪಗಳನ್ನು ಸಮಾಜಕ್ಕೆ ನೀಡಬೇಕು ಎಂದು ಹೇಳಿದರು.

ಸಚಿವ ಎಸ್.ಅಂಗಾರ ಉದ್ಘಾಟನೆ ನೆರವೇರಿಸಿದರು. “ಹಿರಿಯರ ಆದರ್ಶಗಳೇ ನಮಗೆ ದಾರಿದೀಪ. ದಿನದ ಮಹತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಾರ್ಥಕತೆ ಸಾಧ್ಯ” ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ತೀರ್ಥರಾಮ ಎ.ವಿ., ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಾಲೂಕು ತಹಶೀಲ್ದಾರ್ ಕು.ಅನಿತಾಲಕ್ಷ್ಮೀ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ವಿಶ್ವನಾಥ ಗೌಡ, ಉಪಪ್ರಾಂಶುಪಾಲ ಉಮಾಕುಮಾರಿ, ಹುಣಸೂರು ದೀಕ್ಷಾ ಎಜ್ಯುಕೇಶನಲ್ ಟ್ರಸ್ಟ್‌ ಪ್ರಾಂಶುಪಾಲ ಪಾಂಡುರಂಗ ವೇದಿಕೆಯಲ್ಲಿ ಇದ್ದರು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ಶ್ರೀಮತಿ ವೀಣಾ ಎಂ.ಟಿ., ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್, ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಕೆರೆಮೂಲೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಕೆ.ಎಸ್., ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಶಿವಪ್ರಸಾದ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪ್ರಾಂಶುಪಾಲ – ಮುಖ್ಯೋಪಾಧ್ಯಾಯ ರ ಸಂಘದ ಕಾರ್ಯದರ್ಶಿ ಪ್ರಕಾಶ ಮೂಡಿತ್ತಾಯ, ಬೆಳ್ಳಾರೆ ಕಾಲೇಜು ಪ್ರಾಂಶುಪಾಲ ವಿಶ್ವನಾಥ, ಉಪಪ್ರಾಂಶುಪಾಲೆ ಉಮಾಕುಮಾರಿ
ವೇದಿಕೆಯಲ್ಲಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಮಮತಾ ಮೂಡಿತ್ತಾಯ, ಮಮತಾ ಜಯನಗರ ಕಾರ್ಯಕ್ರಮ ನಿರೂಪಿಸಿದರು