ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

0

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ. ವಹಿಸಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ. ಅದಲ್ಲದೆ ಒಂದು ದೇಶವನ್ನು ಕಟ್ಟಲು ಸಹ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಇತರರ ಜೀವನವನ್ನುರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಜೀವನದ ಪಾಠವನ್ನು ಕಲಿಸಿಕೊಡುವ ಶಿಕ್ಷಕರಿಗೆ ಇದೊಂದು ಬಹುಮುಖ್ಯ ದಿನವೆಂದು ಶಿಕ್ಷಕರ ದಿನಾಚರಣೆಯ ಶುಭಾಶಯವನ್ನು ಕೋರಿದರು.

ಇದೇ ಸಂದರ್ಭದಲ್ಲಿ ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ. ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣನ್ ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದು ಇವರು ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಶಿಕ್ಷಣ ಕ್ಷೇತ್ರ, ತಂತ್ರಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಮೇಧಾವಿಯ ಹೆಸರು ಇಂದಿಗೂ ಭಾರತೀಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಶಿಕ್ಷಕ ವೃಂದಕ್ಕೆ ಶುಭಾಶಯ ಕೋರಿದರು. ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್. ಮಾತನಾಡಿ ಶಿಕ್ಷಕರು ಕೇವಲ ಪಠ್ಯ ಪುಸ್ತಕದಲ್ಲಿರುವ ಪಾಠಗಳನ್ನು ಮಾತ್ರ ಹೇಳುವುದಲ್ಲದೆ, ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ಕೂಡಾ ನೀಡುತ್ತಾರೆ. ವಿದ್ಯಾರ್ಥಿಗಳು ತಪ್ಪು ಮಾಡಿದರೆ ಅದನ್ನು ಸೂಕ್ಷವಾಗಿ ತಿದ್ದುವುದರೊಂದಿಗೆ ಒಬ್ಬ ವಿದ್ಯಾರ್ಥಿಯನ್ನು ದೇಶದ ಉತ್ತಮ ಪ್ರಜೆಯನ್ನಾಗಿ ಮಾಡುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ನುಡಿದರು.

ಅನುಷಾಲಕ್ಶ್ಮಿ ಪ್ರಾರ್ಥನೆಗೈದು ಪ್ರೊ. ಅರುಣ ಪಿ.ಜಿ. ಕಾರ್ಯಕ್ರಮ ನಿರೂಪಿಸದರು. ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಲೋಕೇಶ್ ಪಿ.ಸಿ. ಮತ್ತು ಡಾ. ಪ್ರಜ್ಞಾ ಎಂ.ಆರ್. ಕಾರ್ಯಕ್ರಮ ಆಯೋಜಿಸಿದರು. ಕಾರ್ಯಕ್ರಮದಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥರು ಪ್ರೊ. ಕೃಷ್ಣಾನಂದ ಎ., ಭೌತಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗು ಡೀನ್-ಎಕ್ಸಾಮಿನೇಶನ್ ಡಾ. ಪ್ರವೀಣ ಎಸ್.ಡಿ., ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರು ಡಾ. ಸುರೇಖ ಎಂ., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ., ಡೀನ್-ಅಡ್ಮಿಶನ್ ಪ್ರೊ. ಬಾಲಪ್ರದೀಪ್ ಕೆ.ಎನ್., ಡೀನ್-ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ., ಡೈರೆಕ್ಟರ್ ಆಫ್ ಪಿ.ಜಿ. ಸ್ಟಡೀಸ್ ಡಾ. ಸವಿತಾ ಎಂ., ಡೀನ್-ರೀಸರ್ಚ್ ಡಾ. ಸವಿತಾ ಸಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ, ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಮತ್ತು ಇತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.