ಕೆವಿಜಿ ಐಪಿಎಸ್ ನಲ್ಲಿ ಶಿಕ್ಷಕರ ದಿನಾಚರಣೆ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಅತಿ ಉತ್ಸಾಹದಿಂದ ವಿದ್ಯಾರ್ಥಿಗಳು ಆಚರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಹತ್ತನೇ ತರಗತಿಯ ಅಫೀಝ ಮತ್ತು ಲಾಸ್ಯ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕರ ಮನೋರಂಜನೆಗಾಗಿ ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಮತ್ತು ಮನೋರಂಜನಾತ್ಮಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು.

ಈ ಕಾರ್ಯಕ್ರಮಕ್ಕೆ ಕೆವಿಜಿ ಐಪಿಎಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ಆಗಮಿಸಿ ‘ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಹಾಕುವವರೇ ಶಿಕ್ಷಕರು. ವಿದ್ಯಾರ್ಥಿಗಳಲ್ಲಿ ಆದರ್ಶ ಗುಣವನ್ನು ಬೆಳೆಸಲು ಶಿಕ್ಷಕರ ಪಾತ್ರ ಮಹತ್ತರವಾದದ್ದು’ ಎಂಬುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್’ ಶಿಕ್ಷಕರೆಲ್ಲರೂ ಉತ್ತಮ ಶಿಕ್ಷಣ ಕೊಡುವಲ್ಲಿ ತಮ್ಮ ಕರ್ತವ್ಯಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು ‘ ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಎಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭ ಹಾರೈಸಿದರು. ಈ ಕಾರ್ಯಕ್ರಮವನ್ನು ಹತ್ತನೇ ತರಗತಿಯ ಅನುಷಾ, ಹಿಮಾನಿ, ಸೃಜನ ಮತ್ತು ತನ್ವಿ ನಿರೂಪಿಸಿದರು. ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.