ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

0

ಸುಳ್ಯ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಉಪನ್ಯಾಸಕರಿಗಾಗಿ ವಿವಿಧ ವಿನೋದದ ಆಟದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಅಪರಾಹ್ನ ಸಭಾ ಕಾರ್ಯಕ್ರಮದಲ್ಲಿ ಮೊದಲಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಗುರುಗಳಿಗೆ ನೆನೆಪಿನ ಕಾಣಿಕೆ ಹಾಗೂ ಬಹುಮಾನ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ ಯವರು ವಹಿಸಿದ್ದರು. ಶ್ರೀಮತಿ ಸ್ವರ್ಣಕಲಾರವರು ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು. ವಿದ್ಯಾರ್ಥಿನಿಯರಾದ ಲಿಖಿತ, ಅಮೂಲ್ಯ ಮತ್ತು ರೀನಾ ದಿನಾಚರಣೆಯ ಬಗ್ಗೆ ಮಾತನಾಡಿದರು.ಕಾಲೇಜು ನಾಯಕಿ ತುಳಸಿ ಸ್ವಾಗತಿಸಿ, ಚೈತನ್ಯ ವಂದಿಸಿದರು. ಸ್ವಸ್ತಿಶ್ರೀ ಹಾಗೂ ಸಾತ್ವಿಕ ಕಾರ್ಯಕ್ರಮ ನಿರೂಪಿಸಿದರು.