ಸ್ನೇಹ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

 

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳು ಸೆ.6 ರಂದು ಹಮ್ಮಿಕೊಂಡಿದ್ದರು.

ಶಿಕ್ಷಕರೆಲ್ಲರೂ ಸ್ಪರ್ಧಾ ಸ್ಫೂರ್ತಿಯಿಂದ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಅಧ್ಯಕ್ಷತೆ ವಹಿಸಿ ಮಕ್ಕಳ ಕ್ರಿಯಾಶೀಲತೆಯನ್ನು ಶ್ಲಾಘಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಹತ್ತನೇ ತರಗತಿಯ ವಿದ್ಯಾರ್ಥಿಗಳು ಎಲ್ಲ ಶಿಕ್ಷಕರಿಗೂ ಕಿರುಕಾಣಿಕೆಗಳನ್ನು ನೀಡಿ ತಮ್ಮ ಗುರುಭಕ್ತಿಯನ್ನು ಮೆರೆದರು. ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here