ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಮಿತಿ ರಚನೆ

0

 

ಅಧ್ಯಕ್ಷರಾಗಿ ಗಂಗಾಧರ ಮಟ್ಟಿ: ಪ್ರ.ಕಾರ್ಯದರ್ಶಿ ದುರ್ಗಾಕುಮಾರ್ ನಾಯರ್‌ ಕೆರೆ

 

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸ್ಥಾಪನೆಯಾಗಿ 25 ವರ್ಷ ಪೂರ್ತಿಯಾಗಿರುವ ಹಿನ್ನಲೆಯಲ್ಲಿ ಬೆಳ್ಳಿ ಹಬ್ಬ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ಳಿ ಹಬ್ಬ ವರ್ಷದಲ್ಲಿ ವರ್ಷ ಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗು ಮುಂದಿನ ಏಪ್ರಿಲ್ ತಿಂಗಳಲ್ಲಿ 3 ದಿನಗಳ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.

ಬೆಳ್ಳಿ ಹಬ್ಬ ಆಚರಣೆಗೆ ಸಮಿತಿಯನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ ಗಂಗಾಧರ ಮಟ್ಟಿ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ದುರ್ಗಾಕುಮಾರ್ ನಾಯರ್‌ಕೆರೆ, ಕೋಶಾಧಿಕಾರಿಯಾಗಿ ಗಿರೀಶ್‌ ಅಪ್ಪಂಗಾಯ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಸಮಿತಿಯ ಗೌರವಾಧ್ಯಕ್ಷರಾಗಿರುತ್ತಾರೆ. ಉಪಾಧ್ಯಕ್ಷರಾಗಿ ಜಯಪ್ರಕಾಶ್ ಕುಕ್ಕೆಟ್ಟಿ, ಲೋಕೇಶ್ ಪೆರ್ಲಂಪಾಡಿ, ಪದ್ಮನಾಭ ಮುಂಡೋಕಜೆ, ಕೃಷ್ಣ ಬೆಟ್ಟ ಸತೀಶ್ ಹೊದ್ದೆಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ಪ್ರಜ್ಞಾ ಎಸ್.ನಾರಾಯಣ್‌ ಅಚ್ರಪ್ಪಾಡಿ, ಜಯದೀಪ್ ಕುಲ್ಕುಳಿ ಆಯ್ಕೆಯಾಗಿದ್ದಾರೆ. ಸಂಘದ ಎಲ್ಲಾ ಸದಸ್ಯರು ಬೆಳ್ಳಿ ಹಬ್ಬ ಸಮಿತಿಯ ನಿರ್ದೇಶಕರಾಗಿರುತ್ತಾರೆ.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿವಪ್ರಸಾದ್‌ ಕೇರ್ಪಳ ಸ್ವಾಗತಿಸಿ, ವಂದಿಸಿದರು. ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here