ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

0
83

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ.5 ರಂದು ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಪ್ರಾರಂಭದಲ್ಲಿ ಸರ್ವಪಳ್ಳಿ ರಾಧಾಕೃಷ್ಣ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಶಿಕ್ಷಕರಿಗಾಗಿ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ವಿದ್ಯಾರ್ಥಿಗಳಿಗೆ ಶಿಕ್ಷಕರ ಮಹತ್ವವನ್ನು ತಿಳಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಉಡುಗೊರೆಗಳನ್ನು ನೀಡಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ,ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ಎಲ್ಲಾ ಬೋಧಕ ಬೋದಕೇತರ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here