ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಡ್ಕಾರು ನೂತನ ಗೋದಾಮು ಕಟ್ಟಡದಲ್ಲಿ ಗಣಪತಿ ಹವನ

0
309

 

p>

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದಲ್ಲಿ ಗಣಪತಿ ಹವನವು ಪುರೋಹಿತ ಮಂಜುನಾಥ ಐತಾಳ್ ಅವರ ನೇತೃತ್ವದಲ್ಲಿ ಸೆ.9ರಂದು ಬೆಳಿಗ್ಗೆ ಜರುಗಿತು.


ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ನಿರ್ದೇಶಕರುಗಳಾದ ಕರುಣಾಕರ ರೈ ಕುಕ್ಕಂದೂರು, ಶೇಷಪ್ಪ ನಾಯ್ಕ ಕಜೆಗದ್ದೆ, ಸುಖೇಶ್ ಅಡ್ಕಾರುಪದವು, ,ಗಣೇಶ್ ಅಂಬಾಡಿಮೂಲೆ, ಶ್ರೀಮತಿ ಪ್ರೇಮಲತಾ ಪಲ್ಲತ್ತಡ್ಕ, ಶ್ರೀಮತಿ ಭಾರತಿ ಪಿ.ಕೆ. ಕಜೆಗದ್ದೆ, ಶ್ರೀಮತಿ ಸಾವಿತ್ರಿ ಕಾರಿಂಜ, ಶ್ರೀಕೃಷ್ಣ ಭಟ್ ನೆಡಿಲು, ಸೀತಾರಾಮ ಮಠ, ಮಾಜಿ ಅಧ್ಯಕ್ಷರುಗಳಾದ ಜಯರಾಮ ರೈ ಜಾಲ್ಸೂರು, ಎನ್.ಎಂ. ಸತೀಶ್ ಕೆಮನಬಳ್ಳಿ, ನೇತ್ರಕುಮಾರ್ ಪೇರೋಳಿ, ಐ.ಕೆ. ಹೇಮಚಂದ್ರ ಕದಿಕಡ್ಕ, ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಹಿರಿಯರಾದ ನಾಗಪ್ಪ ಮಾಸ್ತರ್ ಬೊಮ್ಮೆಟ್ಟಿ, ಸೇರಿದಂತೆ ಸಹಕಾರಿ ಸಂಘದ ಸಿಬ್ಬಂದಿಗಳು ಹಾಗೂ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here