ಬೆಳ್ಳಾರೆ : ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಮಾಯಿಲಪ್ಪರಿಗೆ ಗೌರವ

0
138

p>

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ,ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಮಾಯಿಲಪ್ಪ ಇವರನ್ನು
ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ
ಭವಾನಿಶಂಕರರವರು ಅಭಿನಂದಿಸಿ ಗೌರವಿಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಗೌರವಾರ್ಪಣೆ ಮಾತುಗಳನ್ನಾಡಿದರು.

LEAVE A REPLY

Please enter your comment!
Please enter your name here