ಪೆರಾಜೆ ಪ್ರಾಥಮಿಕ ಸಹಕಾರ ಸಂಘಕ್ಕೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

0

 

2021-22 ನೇ ಸಾಲಿನಲ್ಲಿ ಪರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘವು ಉತ್ತಮ ಸಾಧನೆ ಮಾಡಿದ್ದು ಇದಕ್ಕಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ  ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷರಾದ ಶ ಅಶೋಕ ಪಿಎಂ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಎಚ್ ಕೆ ಇವರು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷರಿಂದ ಪ್ರಶಸ್ತಿ ಸ್ವೀಕರಿಸಿದರು.