ಕಾಸರಗೋಡಿನ ಕನ್ನಡ ಭವನದ ಕನ್ನಡ ಪಯಸ್ವಿನಿ ಪ್ರಶಸ್ತಿ -2022 ಪ್ರಶಸ್ತಿಗೆ ಸುಳ್ಯದ ಡಾ ಅನುರಾಧಾ ಕುರುಂಜಿ ಆಯ್ಕೆ

0

 

 

ಸುಳ್ಯದ ಸಾಹಿತಿ, ಕವಿ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿ, ಉಪನ್ಯಾಸಕಿ ಡಾ ಅನುರಾಧ ಕುರುಂಜಿ ಇವರ ಅಪೂರ್ವ ಬಹುಮುಖ ಪ್ರತಿಭೆಯನ್ನು ಮಾನಿಸಿ ಕಾಸರಗೋಡಿನ ಕನ್ನಡ ಭವನ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿ 2022 ಕ್ಕೆ ಆಯ್ಕೆ ಮಾಡಲಾಗಿದೆ.

ಸೆ. 11 ರಂದು ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ನುಳ್ಳಿಪಾಡಿ ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಅದೇ ದಿನ ಕಾಸರಗೋಡಿನಲ್ಲಿ ನಡೆಯುವ ಕಾಸರಗೋಡು ಜಿಲ್ಲಾ ಆರನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಇವರು ಮುಖ್ಯ ಅತಿಥಿಯಾಗಿಯೂ ಭಾಗವಹಿಸಲಿದ್ದಾರೆ. ಈ ಹಿಂದೆ ಸಾಹಿತ್ಯ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

LEAVE A REPLY

Please enter your comment!
Please enter your name here