ಬೈಕ್ ಡಿಕ್ಕಿ- ಬಾಲಕಿ ಸಾವು

0

 


ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ವರದಿಯಾಗಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕೊಂಡು ಡಿಕ್ಕಿ ಹೊಡೆಯಿತು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬದುಕಿಸಿಕೊಳ್ಳಲಾಗಲಿಲ್ಲವೆಂದು ತಿಳಿದು ಬಂದಿದೆ.