ಆಲೆಟ್ಟಿ ಸದಾಶಿವ ದೇವಳದ ಉಳ್ಳಾಕುಲು ಚಾವಡಿ ಜೀರ್ಣೋದ್ಧಾರ ಕಾರ್ಯದ ಸಭೆ- ನವರಾತ್ರಿ ಭಜನೆಯ ಆಮಂತ್ರಣ ಬಿಡುಗಡೆ

0

 

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಸಂಬಂಧಿಸಿದ ಶ್ರೀ ಉಳ್ಳಾಕುಲು ಚಾವಡಿ ನಿರ್ಮಾಣದ ಜೀರ್ಣೋದ್ಧಾರ ಕಾರ್ಯದ ಕುರಿತು ಪೂರ್ವಭಾವಿ ಸಭೆಯು ಸೆ‌.10 ರಂದು ದೇವಳದ ವಠಾರದಲ್ಲಿ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅನುವಂಶಿಕ ಮೊಕ್ತೇಸರರ ಪೈಕಿ ಶ್ರೀಪತಿ ಬೈಪಡಿತ್ತಾಯ, ಗುಂಡ್ಯ ಮಾಡಾರಮನೆ ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷ ಅಶೋಕ ಪ್ರಭು ಸುಳ್ಯ, ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು,ಜೀರ್ಣೋದ್ಧಾರದ ಆರ್ಥಿಕ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ವ್ಯ .ಸ.ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ.ಬಡ್ಡಡ್ಕ, ಜೀರ್ಣೋದ್ಧಾರ ಸಮಿತಿ ಪ್ರ.ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ ಉಪಸ್ಥಿತರಿದ್ದರು.


ಉಳ್ಳಾಕುಲು ಚಾವಡಿ ನಿರ್ಮಾಣ ಕಾರ್ಯದ ವರದಿಯನ್ನು ಕೃಪಾಶಂಕರ ರವರು ಮಂಡಿಸಿದರು. ವಾರ್ಡುವಾರು ಮನೆ ಭೇಟಿ ಹಾಗೂ ನಿಧಿ ಸಂಗ್ರಹದ ಕುರಿತು ಸಂಚಾಲಕರು ಅಭಿಪ್ರಾಯ ವ್ಯಕ್ತ ಪಡಿಸಿದರು. ಧನ ಸಂಗ್ರಹದ ಬಗ್ಗೆ ಬಾಕಿ ಉಳಿದ ಮನೆಗಳಿಗೆ ಭೇಟಿ ನೀಡುವ ಕುರಿತು ಚರ್ಚಿಸಲಾಯಿತು.


ಈ ಸಂದರ್ಭದಲ್ಲಿ ನವರಾತ್ರಿಯ ಸಮಯದಲ್ಲಿ ದೇವಳದಲ್ಲಿ 9 ದಿನ ನಡೆಯಲಿರುವ ಭಜನಾ ಕಾರ್ಯಕ್ರಮ ಮತ್ತು ದುರ್ಗಾ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ
ಮಾಡಲಾಯಿತು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಹರಿಪ್ರಸಾದ್ ಗಬ್ಬಲ್ಕಜೆ, ಅಚ್ಚುತ ಮಣಿಯಾಣಿ ಆಲೆಟ್ಟಿ, ಸತೀಶ್ ಕುಂಭಕ್ಕೋಡು,ಶ್ರೀಮತಿ ಮಮತ ಮುಕುಂದ ನಾರ್ಕೋಡು, ನಳಿನಿ ನಾರಾಯಣ ರೈ ಆಲೆಟ್ಟಿ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಗ್ರಾಮಸ್ಥರು ಭಾಗವಹಿಸಿದರು. ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಸ್ವಾಗತಿಸಿದರು. ಭಜನಾ ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಆಲೆಟ್ಟಿ ವಂದಿಸಿದರು.