ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ

0

ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.
ಶಾಲಾ ಪ್ರಾಂಶುಪಾಲರು ಅವರ ಶಿಕ್ಷಕ ವೃತ್ತಿಯ ಅನುಭವಗಳನ್ನು ಹಂಚಿಕೊಂಡರು. ಎಲ್ಲಾ ಶಿಕ್ಷಕವೃಂದದವರು ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಾದ ಹೊಸ ಅನುಭವಗಳನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದರು.
ಹಾಡು, ಭಾಷಣಗಳ ಮೂಲಕ ೯ನೇ ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಿರ್ವಹಿಸಿದರು.


ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರಿಗೂ ಸ್ಮರಣಿಕೆಯನ್ನು ನೀಡಿ ಅವರನ್ನು ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್, ಲೀಲಾವತಿ ರುಕ್ಮಯ್ಯದಾಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ,ಸದಸ್ಯರು, ವಿದ್ಯಾರ್ಥಿಗಳು ಮತ್ತು ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ೧೦ನೇ ತರಗತಿಯ ಅನಮ್ ಫಾತಿಮಾ ಮತ್ತು ನೇಹಾ. ಎ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.