ಸೆ.18: ಮುರುಳ್ಯ- ಎಣ್ಮೂರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

 

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.18ರಂದು ನಿಂತಿಕಲ್ಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿಯ ಸಾಧನ ಸಹಕಾರ ಸೌಧದಲ್ಲಿ ಸಂಘದ ಅಧ್ಯಕ್ಷ ವಸಂತ ಹೆಚ್.ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಪಿ.ಯು.ಸಿ.ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಗುವುದು. ಅಂತಹ ವಿದ್ಯಾರ್ಥಿಗಳು ಸೆ.15ರ ಒಳಗೆ ಹೆಸರು ಮತ್ತು ಅಂಕ ಪಟ್ಟಿಯ ಜೆರಾಕ್ಸ್ ನ್ನು ಸಂಸ್ಥೆಗೆ ನೀಡಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.