ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಶತಮಾನೋತ್ಸವ ಮತ್ತು ಗೋದಾಮು ಕಟ್ಟಡ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

 

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಮತ್ತು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಸೆ.11ರಂದು ಜರುಗಿತು.
ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಕಾರ್ಯಕ್ರಮವನ್ನು ದೀಪಬೆಳಗಿಸಿ, ಉದ್ಘಾಟಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಡಾ. ಗಿರೀಶ್ ಭಾರದ್ವಾಜ್ ಅವರನ್ನು ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳಾದ ಜಯರಾಮ ರೈ ಜಾಲ್ಸೂರು ಹಾಗೂ ಐ.ಕೆ. ಹೇಮಚಂದ್ರ ಕದಿಕಡ್ಕ ಅವರು ಜಂಟಿಯಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಶತಮಾನೋತ್ಸವ ಆಮಂತ್ರಣ ಸಮಿತಿಯ ಸಂಚಾಲಕ ಶಿವರಾಮ ರೈ ಕುರಿಯಗುತ್ತು , ಸಹಕಾರಿ ಸಂಘದ ನಿರ್ದೇಶಕರುಗಳಾದ ಕರುಣಾಕರ ರೈ ಕುಕ್ಕಂದೂರು, ಶೇಷಪ್ಪ ನಾಯ್ಕ ಕಜೆಗದ್ದೆ, ಸುಖೇಶ್ ಅಡ್ಕಾರುಪದವು, ಗಣೇಶ್ ಅಂಬಾಡಿಮೂಲೆ, ಸೀತಾರಾಮ ಮಠ, ಶ್ರೀಕೃಷ್ಣ ಭಟ್ ನೆಡಿಲು, ಶ್ರೀಮತಿ ಭಾರತಿ ಕಜೆಗದ್ದೆ, ಶ್ರೀಮತಿ ಸಾವಿತ್ರಿ ಕಾರಿಂಜ, ಶ್ರೀಮತಿ ಪ್ರೇಮಲತಾ ಪಲ್ಲತ್ತಡ್ಕ, ಸಹಕಾರಿ ಸಂಘದ ನಿರ್ದೇಶಕ ಮಹೇಶ್ವರ ಕಾರಿಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ವಂದಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸಹಕಾರಿ ಬಂಧುಗಳು ಸೇರಿದಂತೆ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.