ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಮತ್ತು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಸೆ.11ರಂದು ಜರುಗಿತು.
ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಕಾರ್ಯಕ್ರಮವನ್ನು ದೀಪಬೆಳಗಿಸಿ, ಉದ್ಘಾಟಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಡಾ. ಗಿರೀಶ್ ಭಾರದ್ವಾಜ್ ಅವರನ್ನು ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳಾದ ಜಯರಾಮ ರೈ ಜಾಲ್ಸೂರು ಹಾಗೂ ಐ.ಕೆ. ಹೇಮಚಂದ್ರ ಕದಿಕಡ್ಕ ಅವರು ಜಂಟಿಯಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸಹಕಾರಿ ಬಂಧುಗಳು ಸೇರಿದಂತೆ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.