ರಾಜ್ಯಒಕ್ಕಲಿಗರ ಸಂಘ ಎಂಪ್ಲಾಯೀಸ್ ಅಸೋಸಿಯೇಷನ್ ವತಿಯಿಂದ ಡಾ. ರೇಣುಕಾಪ್ರಸಾದ್ ಕೆ.ವಿ. ಯವರಿಗೆ ಸನ್ಮಾನ

0

 

ರಾಜ್ಯಒಕ್ಕಲಿಗರ ಸಂಘದ ಎಂಪ್ಲಾಯೀಸ್ ಅಸೋಸಿಯೇಷನ್(ರಿ) ಬೆಂಗಳೂರು ಇದರ ವತಿಯಿಂದ ರಾಜ್ಯಒಕ್ಕಲಿಗರ ಸಂಘದ ಉಪಾಧ್ಯಕ್ಷ ಅಕಾಡೆಮಿ ಆಫ್‌ಲಿಬರಲ್‌ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರನ್ನು ಸನ್ಮಾನಿಸಲಾಯಿತು.


ಸೆ.7 ರಂದು ಬೆಂಗಳೂರಿನ ಒಕ್ಕಲಿಗರ ಸಂಘದ ಕುವೆಂಪು ಕಲಾ ಕ್ಷೇತ್ರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾರತ ಸರಕಾರದ ಸರ್ವೋಚ್ಚ ನ್ಯಾಯಲಯದ ನಿವೃತ್ತ ಮುಖ್ಯ ನ್ಯಾಯ ಮೂರ್ತಿಗಳಾದ ಜಸ್ಟೀಸ್ ವಿ. ಗೋಪಾಲ ಗೌಡರು ರಾಜ್ಯಒಕ್ಕಲಿಗರ ಸಂಘದ ಎಲ್ಲಾಅಧೀನ ಸಂಸ್ಥೆಗಳ ನೌಕರರ ಪರವಾಗಿ ಅಭಿನಂದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಾಜ್ಯಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ, ಉಪಾಧ್ಯಕ್ಷರಾದ ಡಿ. ಹನುಮಂತಯ್ಯ, ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ, ಸಹಾಯಕ ಕಾರ್ಯದರ್ಶಿ ರಾಘವೇಂದ್ರ, ಖಜಾಂಜಿ ಆರ್.ಪ್ರಕಾಶ್ ಮತ್ತು ಸಂಘದ ಇತರ ಕಾರ್ಯಕಾರಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here