ಬೆಳ್ಳಾರೆ : ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ವಾರ್ಷಿಕ ಮಹಾಸಭೆ

0

 

ಕುಲಾಲ ಸುಧಾರಕ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಶೈಲೇಶ್ ನೆಟ್ಟಾರುರವರ ಅಧ್ಯಕ್ಷತೆಯಲ್ಲಿ ಸೆ.11ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಮಾಣಿ ಕುಲಾಲ ಸಂಘದ ಗೌರವಾಧ್ಯಕ್ಷ ಶ್ರೀರಾಮಚಂದ್ರ ಮಾಸ್ಟರ್ ಗಣೇಶ ನಗರ ಮತ್ತು ಹಾರಾಡಿ ಸ.ಹಿ.ಪ್ರಾ.ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಭಾಲತ ಉಪಸ್ಥಿತರಿದ್ದರು.
ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಮತ್ತು ಚೆಸ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಭವಿಷ್ ಕುಲಾಲ್ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ನಿತ್ಯಶ್ರೀ ಪ್ರಾರ್ಥಿಸಿ, ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಬಸ್ತಿಗುಡ್ಡೆ ವಂದಿಸಿದರು.
ಮಧ್ಯಾಹ್ನ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.