ಎನ್ನೆಂಸಿಯಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

0
120

 

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2022-23 ನೇ ಸಾಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವು ಸೆಪ್ಟೆಂಬರ್ 1ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ, ಇದರ ಜತೆ ಕಾರ್ಯದರ್ಶಿ ಕೆ ವಿ ಹೇಮನಾಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಬಾಹ್ಯ ಆಕರ್ಷಣೆಗೆ ಒಳಗಾಗದೇ ಜೀವನದಲ್ಲಿ ಸಮಯಪ್ರಜ್ಞೆ, ಶಿಸ್ತು, ಒಪ್ಪಿಕೊಂಡ ಕಾರ್ಯವನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸುವುದು ಮೊದಲಾದ ವರ್ತನೆಗಳನ್ನು ಮೈಗೂಡಿಸಿಕೊಂಡಾಗ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ಮಾತನಾಡಿ, ಪದವಿ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಉನ್ನತ ಅವಕಾಶಗಳಿಗೆ ಮಹತ್ವದ ರಹದಾರಿಯಾಗಿರುತ್ತದೆ, ವರ್ತಮಾನದಲ್ಲಿ ಪದವಿ ಶಿಕ್ಷಣದ ಬಗ್ಗೆ ನಿರ್ಲಕ್ಷ ಸಲ್ಲದು ಎಂದರು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.


ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಸೌಮ್ಯ ಎಸ್ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಕೆ ಸಂಜೀವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here