ಕೋಟೆಮುಂಡುಗಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ  ಅಧ್ಯಕ್ಷರಾಗಿ ದಿವಾಕರ ಕಾವಿನಮೂಲೆ, ಕಾರ್ಯದರ್ಶಿಯಾಗಿ ಲಕ್ಷ್ಮೀಶ ಕಜೆಮೂಲೆ

0

 

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಸೆ.11 ರಂದು ನಡೆಯಿತು. ಅಧ್ಯಕ್ಷರಾಗಿ ದಿವಾಕರ ಕಾವಿನಮೂಲೆ, ಕಾರ್ಯದರ್ಶಿಯಾಗಿ ಲಕ್ಷ್ಮೀಶ ಕಜೆಮೂಲೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪ್ರಸಾದ್ ಮುಂಡುಗಾರು, ಕೋಶಾಧಿಕಾರಿಯಾಗಿ ಚಂದ್ರಶೇಖರ ಕಜೆಮೂಲೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ ಪಾಂಡಿಪಾಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಧುರಾ ತೋಟದಮೂಲೆ, ಕ್ರೀಡಾ ಕಾರ್ಯದರ್ಶಿಯಾಗಿ ಸತೀಶ್. ಬಿ ದಳ ಅವರನ್ನು ಆಯ್ಕೆ ಮಾಡಲಾಗಿದೆ. ಸಭೆಯ ಆರಂಭದಲ್ಲಿ 31ನೇ ವರ್ಷದ ಶ್ರೀ ಗಣೇಶೋತ್ಸವದ ಲೆಕ್ಕಪತ್ರವನ್ನು ಸಭೆಯ ಮುಂದಿಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ರಾಜೇಶ್ ಅಮೀನ್ ಪಟ್ಟೆ ವಹಿಸಿದ್ದರು. ಕಾರ್ಯದರ್ಶಿ ಗಿರಿಧರ ಕಳಂಜ ಲೆಕ್ಕಪತ್ರವನ್ನು ಮಂಡಿಸಿದರು. ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀ ಕೃಷ್ಣ ಚೊಕ್ಕಾಡಿ ವೇದಿಕೆಯಲ್ಲಿದ್ದರು.