ಎಲಿಮಲೆ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

0

 

 

ವಿದ್ಯಾರ್ಥಿಗಳಲ್ಲಿಯ ಕಲಾತ್ಮಕ ಪ್ರತಿಭೆಯನ್ನು ಹೊರತರುವ ಉತ್ತಮ ವೇದಿಕೆ ಪ್ರತಿಭಾ ಕಾರಂಜಿ : ಎ.ವಿ.

“ವಿದ್ಯಾರ್ಥಿಗಳಲ್ಲಿರುವ ಕಲಾತ್ಮಕ ಪ್ರತಿಭೆ ಹಾಗೂ ಸೃಜನಾತ್ಮಕ ಕೌಶಲ್ಯವನ್ನು ಹೊರಸೂಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಅವಶ್ಯಕ. ಇಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಕೇವಲ ಸೋಲು- ಗೆಲುವುಗಳಷ್ಟೇ ಮುಖ್ಯವಲ್ಲ, ಭಾಗವಹಿಸುವಿಕೆಯೇ ಮುಖ್ಯ ವಾದುದು” ಎಂದು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ ರವರು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ , ಗ್ರಾಮ ಪಂಚಾಯತ್ ದೇವಚಳ್ಳ , ಸರಕಾರಿ ಪ್ರೌಢಶಾಲೆ ಎಲಿಮಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗುತ್ತಿಗಾರು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇವಚಳ್ಳ ಗ್ರಾಪಂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕರು ಮತ್ತು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿಗಳಾದ ವಸಂತ್ ಏನೆಕಲ್ಲು ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ನ ಸದಸ್ಯರಾದ ಶ ಶೈಲೇಶ್ ಅಂಬೆಕಲ್ಲು ಮತ್ತು ಶ್ರೀಮತಿ ಲೀಲಾವತಿ ಸೇವಾಜೆ,
ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ಮತಿ ಶೀತಲ್ ಯು. ಕೆ. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ ಮತ್ತು ನಿವೃತ್ತ ಮುಖ್ಯ ಶಿಕ್ಷಕರಾದ ದಯಾನಂದ್ ಎನ್. ಕೆ. ಭಾಗವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಿರಣ್ ಗುಡ್ಡೆಮನೆ ಅಜ್ಜಾವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗೋಪಿನಾಥ್ ಮೆತ್ತಡ್ಕ, ಶಿವಾಜಿ ಫ್ರೆಂಡ್ಸ್ ಕ್ಲಬ್ ಎಲಿಮಲೆ ಇದರ ಅಧ್ಯಕ್ಷರಾದ ಕಿರಣ ಗುಡ್ಡೆ, ದೇವಚಳ್ಳ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್ , ಶಿಕ್ಷಣ ಸಂಯೋಜಕಿ ಸಂಧ್ಯಾ ಉಪಸ್ಥಿತರಿದ್ದರು. ಈ ಸಮಾರಂಭದಲ್ಲಿ ಪೋಷಕರು ವಿದ್ಯಾಭಿಮಾನಿಗಳು ವಿವಿಧ ಶಾಲೆಯಿಂದ ಆಗಮಿಸಿದ್ದ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಎಸ್ ಡಿಎಂಸಿ ಕಾರ್ಯಾಧ್ಯಕ್ಷ ರಾದ ಜಯಂತ ಹರ್ಲಡ್ಕ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಸಂಧ್ಯಾ ಕೆ. ವಂದಿಸಿದರು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಂತರ ಸ್ಪರ್ಧಾ ಕಾರ್ಯಕ್ರಮಗಳು ನಡೆದು ಅಪರಾಹ್ನ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಈ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಯಂತ್ ಹರ್ಲಡ್ಕ ವಹಿಸಿದ್ದರು. ಅತಿಥಿಗಳಾಗಿ ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಶಿಕ್ಷಣ ಸಂಯೋಜಕರಾದ ಶ್ರೀಮತಿ ನಳಿನಿ ಕೆ. ಭಾಗವಹಿಸಿದರು.

ಸಮಗ್ರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಮತ್ತು ದ್ವಿತೀಯ ಸ್ಥಾನವನ್ನು ಬ್ಲೆಸ್ಡ್ ಕುರಿಯಕೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆ ಗುತ್ತಿಗಾರು ಇವರು ಪಡೆದುಕೊಂಡರು.