ಬ್ಲಾಕ್ ಕಾಂಗ್ರೆಸ್ ಸಭೆ

0

 

ಸ್ವಾತಂತ್ರ್ಯ ನಡಿಗೆಯ ಲೆಕ್ಕಪತ್ರ ಮಂಡನೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯು ಸೆ.15 ರಂದು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು.

 

ಸಭಾಧ್ಯಕ್ಷತೆ ವಹಿಸಿದ್ದ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪಿ.ಸಿ.ಜಯರಾಮರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಖರ್ಚುವೆಚ್ಚಗಳ ಲೆಕ್ಕಪತ್ರ ಮಂಡಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ಜಯಪ್ರಕಾಶ್ ರೈ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭರತ್ ಮುಂಡೋಡಿ, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ದ.ಕ. ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ, ಸುಳ್ಯ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ, ಮಾಜಿ ನ.ಪಂ. ಅಧ್ಯಕ್ಷ ಎಸ್.ಸಂಶುದ್ದೀನ್, ಸುಳ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರು, ಸುಳ್ಯ ಕಾಂಗ್ರೆಸ್ ಎಸ್ಸಿ ಘಟಕ ಅಧ್ಯಕ್ಷ ಆನಂದ ಬೆಳ್ಳಾರೆ, ಸುಳ್ಯ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಪರಮೇಶ್ವರ ಕೆಂಬಾರೆ, ಸುಳ್ಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಜಯಪ್ರಕಾಶ್ ನೆಕ್ರೆಪ್ಪಾಡಿ, ಸುಳ್ಯ ಕಾಂಗ್ರೆಸ್ ಇಂಟಕ್ ಘಟಕದ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕಿಸಾನ್ ಘಟಕದ ಅಧ್ಯಕ್ಷ ಎಂ.ಎಚ್. ಸುರೇಶ್ ಅಮೈ, ಯುವ ಇಂಟಕ್ ಘಟಕದ ಅಧ್ಯಕ್ಷ ಅನಿಲ್ ಬಳ್ಳಡ್ಕ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಶಿಧರ ಎಂ.ಜೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಅಂಬೆಕಲ್ಲು, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಂಗಾಧರ ಪಿ.ಎಸ್, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ, ಆಲೆಟ್ಟಿ ಗ್ರಾಮ ಪಂಚಾಯಿತ್ ಸದಸ್ಯ ಸತ್ಯಕುಮಾರ್ ಆಡಿಂಜ, ಸದಾನಂದ ಮಾವಜಿ, ಮಹಮ್ಮದ್ ಕುಂಞಿ ಗೂನಡ್ಕ, ಶೌವಾದ್ ಗೂನಡ್ಕ, ಸುಜಯಕೃಷ್ಣ, ಗೋಕುಲ್ ದಾಸ್, ಶ್ರೀಮತಿ ರಾಜೀವಿ ರೈ ಬೆಳ್ಳಾರೆ, ಅನಿಲ್ ರೈ ಚಾವಡಿಬಾಗಿಲು ಬೆಳ್ಳಾರೆ, ನಂದರಾಜ್ ಸಂಕೇಶ, ಅಜ್ಜಾವರ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ್, ಅನಿಲ್ ರೈ ಪುಡ್ಕಜೆ, ಶ್ರೀಮತಿ ಪ್ರವೀಣ ರೈ ಮರುವಂಜ, ಹಸೈನಾರ್ ಗೋರಡ್ಕ, ಅಬುಸಾಲಿ ಸಂಪಾಜೆ, ಸುರೇಶ್ ಕಾಮತ್ ಜಯನಗರ , ಫವಾಜ್ ಕನಕಮಜಲು, ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ಚೇತನ್ ಕಜೆಗದ್ದೆ ಹಾಗು ಬ್ಲಾಕ್ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಮತ್ತಿತರ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.