ಅ.22: ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ವತಿಯಿಂದ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮ

0

 

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ವತಿಯಿಂದ ಆದಿಚುಂಚನಗಿರಿ ಮಠದ ಪರಮಪೂಜ್ಯ ನಿರ್ಮಲಾನಂದ ಭಾರತಿ ಸ್ವಾಮೀಜಿಗಳಿಗೆ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮವು ಅ.22ರಂದು ವಿಟ್ಲದ ಅಕ್ಷಯ ಸಭಾಭವನದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ.16ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದ ಆಡಳಿತ ದರ್ಮದರ್ಶಿ ಕೆ. ಕೃಷ್ಣಯ್ಯ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ಗೌರವಾಧ್ಯಕ್ಷ ಕೃಷ್ಣಪ್ಪ ಗೌಡ ನೈಪಾಡಿ, ಅಧ್ಯಕ್ಷ ಕೆ.ಎಸ್. ಗೋಪಾಲಕೃಷ್ಣ ಗೌಡ ಮೂರ್ಜೆ, ಪ್ರಧಾನ ಕಾರ್ಯದರ್ಶಿ ಪಿ.ಯಂ. ಹರೀಶ್ ಮೂರ್ಜೆ, ಟ್ರಸ್ಟಿಗಳಾದ ಪಿ.ಯಂ. ರಾಧಾಕೃಷ್ಣ ಮೂರ್ಜೆ, ಹೊನ್ನಯ್ಯ ಗೌಡ ರಾಯಿ -ಬಂಟ್ವಾಳ, ಸದಸ್ಯರುಗಳಾದ ಗಿರಿಧರ ಗೌಡ ಮೂರ್ಜೆ, ಬಾಲಕೃಷ್ಣ ಗೌಡ ಮೂರ್ಜೆ ಪೆರಿಯಡ್ಕ, ಪದ್ಮನಾಭ ಗೌಡ ಮೂರ್ಜೆ ದೇವಸ್ಯ -ವಿಟ್ಲ, ಕೇಶವ ಗೌಡ ಕೊಡಿಂಜ, ಯಶೋಧರ ಗೌಡ ಕುಂಜಾರು, ಕೂಸಪ್ಪ ಗೌಡ ಪರಮಾರು ಸೇರಿದಂತೆ ತರವಾಡು ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here