ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ರಕ್ತದಾನಿ ಸುಧಾಕರ ರೈ

0

 

 

ಸರ್.ಎಂ.ವಿಶ್ವೇಶ್ವರಯ್ಯ ರವರ ಜನ್ಮ ದಿನಾಚರಣೆಯ ಅಂಗವಾಗಿ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ರಕ್ತದಾನಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಯವರ 60 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕೇಕ್ ಕತ್ತರಿಸಿ ಹಿರಿಯ ಇಂಜಿನಿಯರ್ ರವರು ಶುಭ ಹಾರೈಸುವುದರೊಂದಿಗೆ ಅಸೋಸಿಯೇಷನ್ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ಜನ್ಮ ದಿನದ ಆಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗಾಯಕ ಕೃಷ್ಣರಾಜ್ ಕೇರ್ಪಳ ರವರು ಹಾಡಿನ ಮೂಲಕ ಶುಭಾಶಯ ಕೋರಿದರು.