ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ  :  ಅಂತಿಮ ಕಾನೂನು ಪದವಿ ವಿದ್ಯಾರ್ಥಿಗಳಿಗೆ ವಿದಾಯ ಕೂಟ ಕಾರ್ಯಕ್ರಮ

0

ಪ್ರಾಮಾಣಿಕತೆಯೇ ಗೆಲುವಿನ ಮೆಟ್ಟಿಲು :  ಪ್ರೊ. ಉದಯಕೃಷ್ಣ ಬಿ.

ಜೀವನದಲ್ಲಿ ವಿದ್ಯಾರ್ಥಿಗಳು ಪ್ರಾಮಾಣೆಕತೆ, ಶಿಸ್ತು, ಸಹನೆ ಮತ್ತು ನಿರಂತರ ಅಭ್ಯಾಸವನ್ನು ಮೈಗೂಡಿಸಿಗೊಂಡರೆ ತಮ್ಮ ವೃತ್ತಿ ಜೀವನದಲ್ಲಿ ಉನ್ನತಿಗೇರಲು ಸಾಧ್ಯ ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಉದಯಕೃಷ್ಣ. ಬಿ ಹೇಳಿದರು. ಅವರು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ ಸುಳ್ಯ ಇದರ ೨೦೨೧-೨೨ನೇ ಸಾಲಿನ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ  ವಿದಾಯ ಕೂಟ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ .ಬಿ ಇವರು ಬೀಳ್ಕೊಡಲ್ಪಡುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here