ಸೆ.20 : ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕ ವತಿಯಿಂದ ಫಾಝಿಲ್ ಮತ್ತು ಮಸೂದ್ ಕುಟುಂಬಕ್ಕೆ ಅನುದಾನ ನೀಡುವಲ್ಲಿ ಸರ್ಕಾರದ ತಾರತಮ್ಯ ಧೋರಣೆ ವಿರುದ್ಧ ಪ್ರತಿಭಟನೆ

0
133

p>

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ವತಿಯಿಂದ ಸೆ 20 ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ಸುಳ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಎಲ್ಲಾ ನಾಯಕರು, ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಮಸೂದ್ ಹಾಗೂ ಪಾಝಿಲ್ ಹತ್ಯೆಗೆ ಸಂಬಂಧಿಸಿ ಪರಿಹಾರ ನೀಡುವಲ್ಲಿ ಮತ್ತು ತನಿಖೆ ನಡೆಸುವುದರಲ್ಲಿ ರಾಜ್ಯ ಸರಕಾರದ ತಾರತಮ್ಯ ಧೋರಣೆಯನ್ನು ಖಂಡಿಸಿ ಮೌನ ಪ್ರತಿಭಟನೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here