ಬೂಡು ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ

0

 

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ , ಬಾಲವಿಕಾಸ ಸಮಿತಿ, ಅಂಗನವಾಡಿ ಕೇಂದ್ರ ಬೂಡು ಇವುಗಳ ಆಶ್ರಯದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ, ಪೌಷ್ಟಿಕಾಹಾರ ಸಪ್ತಾಹ ಬೂಡು ಅಂಗನವಾಡಿಯಲ್ಲಿ ಸೆ.17ರಂದು ನಡೆಯಿತು.

 

 

ಕಾರ್ಯಕ್ರಮವನ್ನು ವೇದಿಕೆಯಲ್ಲಿದ್ದ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸೌಮ್ಯ ವಹಿಸಿದ್ದರು.


ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಸದಸ್ಯರಾದ ಗೋಪಾಲ ನಡುಬೈಲು, ಸಂಜೀವ ಅಚಾರ್ಯ, ಇನ್ನರ್ ವೀಲ್ ಕ್ಲಬ್ ನ ಸದಸ್ಯೆ ಹಾಗೂ ಬಾಲವಿಕಾಸ ಸಮಿತಿ ಸದಸ್ಯೆ ಶ್ರೀಮತಿ ಲತಾ ರೈ, ಸಮುದಾಯ ಆರೋಗ್ಯಾಧಿಕಾರಿ ಕುಮಾರಿ ರಶ್ಮಿ, ತಾಯಂದಿರ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಜನಾರ್ದನ್ ಉಪಸ್ಥಿತರಿದ್ದರು.

 

ಸಮುದಾಯ ಆರೋಗ್ಯಾಧಿಕಾರಿ ಕುಮಾರಿ ರಶ್ಮಿಯವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ತಾಯಂದಿರು ಪೌಷ್ಠಿಕ ಆಹಾರವನ್ನು ತಯಾರಿಸಿ ತಂದಿದ್ದರು. ಅವುಗಳಲ್ಲಿ ಹೆಚ್ಚಿನ ಪೋಷಕಾಂಶವುಳ್ಳ ಆಹಾರವನ್ನು ಆಯ್ಕೆ ಮಾಡಿ ಬಹುಮಾನ ನೀಡಲಾಯಿತು.

ಸಹಾಯಕ ಸರ್ಕಾರಿ ಅಭಿಯೋಜಕ ಜನಾರ್ದನ ಬಿ.ರವರು ಬಹುಮಾನದ ಪ್ರಾಯೋಜಕರಾಗಿದ್ದರು. ಅಂಗನವಾಡಿ ಮಕ್ಕಳು ಪ್ರಾರ್ಥನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಕುಮಾರಿ ಕವಿತಾರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ತಾಯಂದಿರು, ಅಂಗನವಾಡಿ ಕೇಂದ್ರದ ಪುಟಾಣಿಗಳು, ಅಂಗನವಾಡಿ ಸಹಾಯಕಿ ಶ್ರೀಮತಿ ಕುಸುಮಾ, ಸಾರ್ವಜನಿಕರು ಉಪಸ್ಥಿತರಿದ್ದರು.