ಸೆ.25 ರಿಂದ ಅ.04 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

0

 

ಪ್ರತೀ ದಿನ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯು ಸೆ.25 ರಿಂದ ಪ್ರಾರಂಭಗೊಂಡು
ಅ. 04ರವರೆಗೆ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ, ಸಾಂಸ್ಜೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.25 ರಂದು ಸಂಜೆ ಗಂಟೆ 7.00 ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಅನಂತ ಪದ್ಮನಾಭರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಂದರು ,ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಮೋಹನರಾಂ ಸುಳ್ಳಿ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ರಾತ್ರಿ ಗಂಟೆ 8.00 ಕ್ಕೆ ಶ್ರೀ ಕ್ಷೇತ್ರದ ರಂಗಪೂಜೆ ನಡೆಯಲಿದೆ.
ಗಂಟೆ 9.00 ಕ್ಕೆ ಭಕ್ತಾದಿಗಳ ಸಾಮೂಹಿಕ ರಂಗಪೂಜೆ ನಡೆಯಲಿದೆ.
ನಂತರ ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಪ್ರತೀ ದಿನ ಸಂಜೆ ಗಂಟೆ 7.00ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸೆ.25 ರಂದು ” ನೃತ್ಯಾರ್ಪಣಂ”
ಕಾರ್ಯಕ್ರಮ ನಡೆಯಲಿದೆ.
ಸೆ.26 ರಂದು ಯಕ್ಷಗಾನ ಬಯಲಾಟ ಪ್ರಸಂಗ : ಏಕಾದಶಿ ಶ್ರೀದೇವಿ ಮಹಾತ್ಮೆ ನಡೆಯಲಿದೆ.
ಸೆ.27 ರಂದು ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.
ಸೆ.28 ರಂದು ” ಯಕ್ಷ – ಗಾನ ವೈಭವ” ನಡೆಯಲಿದೆ.ಸೆ.29 ರಂದು “ಗಿಲಿ ಗಿಲಿ ಮ್ಯಾಜಿಕ್” ಜಾದೂ ಕಾರ್ಯಕ್ರಮ ನಡೆಯಲಿದೆ.
ಸೆ.30 ರಂದು ” ಭಕ್ತಿ ಸುಧೆ” ನಡೆಯಲಿದೆ.
ಅ.1 ರಂದು ” ನೃತ್ಯಾಭಿಷೇಕ ” ನಡೆಯಲಿದೆ.
ಅ.2 ರಂದು ನೃತ್ಯ ವೈವಿಧ್ಯ ನಡೆಯಲಿದೆ.
ಅ.03 ರಂದು “ಸಾಂಸ್ಕೃತಿಕ ವೈಭವ” ನಡೆಯಲಿದೆ.
ಅ.04 ರಂದು ಮಧ್ಯಾಹ್ನ ಸಾಂಭವಿ ವಿಲಾಸ ಯಕ್ಷಗಾನ ರಾತ್ರಿ ಮಹಿಷ ವಧೆ ಯಕ್ಷಗಾನ ನಡೆಯಲಿದೆ.
ನಂತರ ಸಭಾ ಕಾರ್ಯಕ್ರಮ ನಡೆಯಲಿದೆ.
ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ದೇವಸ್ಥಾನದ ವ್ಯ.ಸ.ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ಸೆ.05 ರಂದು ವಿಜಯ ದಶಮಿ ನಡೆಯಲಿದೆ.
ಬೆಳಿಗ್ಗೆ ಕುಣಿತ ಭಜನೆ ನಡೆಯಲಿದೆ.ಸಂಜೆ ಗಂಟೆ 7.00ಕ್ಕೆ “ಭಕ್ತಿ ಗಾನಾಮೃತ” ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here