ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ 9 ನೇ ಸ್ಥಾನಿಯಾದ ಸುಳ್ಯ ಶ್ರೀ ಶಾರದಾ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಗೆ ಗೌರವ

0

 

2021.22 ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಕಾಲೇಜಿನ ಕಲಾ ವಿಭಾಗದ ಲಿಪಿಶ್ರೀ . ಕೆ.587 ಅಂಕ ಗಳೊಂದಿಗೆ ಜಿಲ್ಲೆಗೆ ದ್ವಿತೀಯ ಹಾಗೂ ರಾಜ್ಯ 9ನೇ ಸ್ಥಾನಿಯಾಗಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ದಿಂದ ಉಜಿರೆಯ ಸಿದ್ಧವನ ಗುರುಕುಲದಲ್ಲಿ ನಡೆದ ಶೈಕ್ಷಣಿಕ ಸಮಾವೇಶದಲ್ಲಿ ಧರ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ರವರಿಂದ 6,ooo ರೂಪಾಯಿ ನಗದು, ಪ್ರಶಸ್ತಿ ಫಲಕ ಗೌರವ ಅಭಿನಂದನೆಯನ್ನು ಸ್ವೀಕರಿಸಿದರು