ಜಟ್ಟಿಪಳ್ಳ ಶಾಲೆಯಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ

0

 

 

ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಹೇಳಿದರು. ಜಟ್ಟಿಪಳ್ಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು. ಪೋಷಣ್ ಮಾಸಾಚರಣೆಯ ಧ್ಯೇಯ ಹೆಚ್ಚು ಜನರನ್ನು ತಲುಪಿದಾಗ ಮಾತ್ರ ನಾವು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಅಧ್ಯಕ್ಷ ತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ ಪೆಲತಡ್ಕ, ಹಿರಿಯ ಮೇಲ್ವಿಚಾರಕಿ ಶ್ರೀಮತಿ ಶೈಲಜಾ.ಬಿ ಪೋಷಣ್ ಮಾಸಾಚರಣೆಯ ಕುರಿತು ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳ ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಕುರಿತು ಮಾಹಿತಿ ‌ನೀಡಿದರು. ಮಾನಸ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ರೇವತಿ, ಕಪಿಲ ಯುವಕ ಮಂಡಲದ ಅಧ್ಯಕ್ಷ ಪ್ರದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಟ್ಟಿಪಳ್ಳ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಇಂದಿರಾ ಸ್ವಾಗತಿಸಿದರು. ಜಟ್ಟಿಪಳ್ಳ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಕುಸುಮಾವತಿ ವಂದಿಸಿದರು. . ಈ ಸಂದರ್ಭದಲ್ಲಿ ಪೌಷ್ಟಿಕ ಆಹಾರ ಪ್ರದರ್ಶನದಲ್ಲಿ ಭಾಗವಹಿಸಿದ ತಾಯಂದಿರಿಗೆ ಬಹುಮಾನ ನೀಡಲಾಯಿತು. ಜಟ್ಟಿಪಳ್ಳ ಸ.ಹಿ.ಪ್ರಾ.ಶಾಲೆ , ಜಟ್ಟಿಪಳ್ಳ ಅಂಗನವಾಡಿ ಕೇಂದ್ರ, ಕಪಿಲ ಯುವಕ ಮಂಡಲ , ಮಾನಸ ಯುವತಿ ಮಂಡಲ , ಶ್ರೀರಾಮ ಭಜನ ಸೇವಾ ಸಂಘದ ಸದಸ್ಯರು ಸಹಕರಿಸಿದರು.