ದುಗ್ಗಲಡ್ಕ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ

0

 

ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬಾಲ ವಿಕಾಸ ಸಮಿತಿ, ಸ್ತ್ರೀ ಶಕ್ತಿ ಗುಂಪು, ಅಂಗನವಾಡಿ ಕೇಂದ್ರ ದುಗ್ಗಲಡ್ಕ ಇವುಗಳ ಆಶ್ರಯದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ, ಪೌಷ್ಟಿಕಾಹಾರ ಸಪ್ತಾಹ ದುಗ್ಗಲಡ್ಕ ಅಂಗನವಾಡಿಯಲ್ಲಿ ಸೆ.16ರಂದು ನಡೆಯಿತು.
ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಅಶ್ವಿತ ವಹಿಸಿದ್ದರು.

ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಸದಸ್ಯರಾದ ಯತೀಶ್ ರೈ ದುಗ್ಗಲಡ್ಕ, ಯಶೋದ ಮೂಡೆಕಲ್ಲು, ದುಗ್ಗಲಡ್ಕ ಪ್ರೌಢಶಾಲಾ ಶಿಕ್ಚಕಿಯರಾದ ಶ್ರೀಮತಿ ಗೀತಾ ಮತ್ತು ಶ್ರೀಮತಿ ಶೋಭಾ ಉಪಸ್ಥಿತರಿದ್ದರು.ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ತೇಜಶ್ರೀ ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಶಶಿಕಲಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪೌಷ್ಟಿಕ ಆಹಾರ ಪ್ರದರ್ಶನದಲ್ಲಿ ಭಾಗವಹಿಸಿದ ತಾಯಂದಿರಿಗೆ ಬಹುಮಾನ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚಿತ್ರಾ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು. ಬಹುಮಾನದ ಪ್ರಾಯೋಜಕರಾಗಿ ಭಾರತೀಯ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೇಶ್ ದುಗಲಡ್ಕ, ಉಪಾಹಾರದ ವ್ಯವಸ್ಥೆಯಲ್ಲಿ  ಮಿತ್ರ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಕೊಯಿಕುಳಿ ಸಹಕರಿಸಿದರು.  ಕಾರ್ಯಕ್ರಮದಲ್ಲಿ ತಾಯಂದಿರು, ಪುಟಾಣಿಗಳು,ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಅಂಗನವಾಡಿ ಸಹಾಯಕಿ ಶ್ರೀಮತಿ ಶಾರದಾ, ಸಾರ್ವಜನಿಕರು ಉಪಸ್ಥಿತರಿದ್ದರು.