ಐವರ್ನಾಡು : ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

0

 

 

ಐವರ್ನಾಡು ಗ್ರಾಮದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ ಇಂದು ನೆರವೇರಿತು. ಇದರ ಉದ್ಘಾಟನಾ ಕಾರ್ಯಕ್ರಮವನ್ನು ದೀಪ ಪ್ರಜ್ಜಲಿಸುವ ಮೂಲಕ ಮೀನುಗಾರಿಕೆ ಬಂದರು ಒಳನಾಡು ಸಾರಿಗೆ ಸಚಿವ ಎಸ್ ಅಂಗಾರರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ ಕೆ., ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಮಡ್ತಿಲ,
ಐವರ್ನಾಡು ಮಡ್ತಿಲ ಕಾಂಪ್ಲೆಕ್ಸ್ ಮಾಲಕ ಸತೀಶ್, ಕೃಪಾ ಕಾಂಪ್ಲೆಕ್ಸ್ ಮಾಲಕ ಕೃಷ್ಣಪ್ಪ ಗೌಡ ನೆಕ್ರೆಪ್ಪಾಡಿ’ ದೀಪಾ ಸರವಣ ಬೇಂಗಮಲೆ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here