ಗುತ್ತಿಗಾರು: ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಲಿಜೋ ಜೋಸ್

0

 

ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಗುತ್ತಿಗಾರು ಇದರ ಶಿಕ್ಷಕ-ರಕ್ಷಕ ಸಂಘದ ಸಭೆಯನ್ನು ಸೆ.17 ಹಮ್ಮಿಕೊಳ್ಳಲಾಯಿತು.

ಶಾಲೆಯ ಸಂಚಾಲಕಿ ಸಿಸ್ಟರ್ ಪಾವನರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸೈಂಟ್ ಮೇರೀಸ್ ಚರ್ಚ್ ನ ಧರ್ಮಗುರುಗಳಾದ ರೆವರೆಂಡ್ ಫಾದರ್ ಆದರ್ಶ್ ಜೋಸೆಫ್‌ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಶಿಧರ ಕೊಯಿಕುಳಿರವರು “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಫೊಷಕರ ಹಾಗೂ ಶಿಕ್ಷಕರ ಪಾತ್ರ ಮುಖ್ಯವಾದದ್ದು, ವಿದ್ಯಾರ್ಥಿಗಳಿಗೆ ಆಸಕ್ತ ಕ್ಷೇತ್ರಗಳಲ್ಲಿ ತನ್ನನ್ನು ತಾನೇ ತೊಡಗಿಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರು ಪ್ರೋತ್ಸಾಹ ನೀಡಬೇಕೆಂದರು. ಸಭೆಯಲ್ಲಿ ಶಾಲಾ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ರಚನೆಯನ್ನು ರಚಿಸಲಾಯಿತು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಲಿಜೋ ಜೋಸ್‌ರವರು ಆಯ್ಕೆಗೊಂಡರು. ಸದಸ್ಯರಾಗಿ ರಾಜ್‌ಕುಮಾರ್ ಪೂಂಬಾಡಿ, ಹಸೈನಾರ್ ವಳಲಂಬೆ, ಭರತ್ ಬೆಳಿಪ್ಪಾಡಿ, ಮೋಹಿನಿ ವಾಲ್ತಾಜೆ, ಹಿತ ಮೆದು ಇವರು ಆಯ್ಕೆಗೊಂಡರು.ಮುಖ್ಯೋಪಾಧ್ಯಾಯಿನಿಯಾದ ಸಿಸ್ಟರ್ ಟ್ರೀಸಾ ಜೋನ್‌ರವರು ಪ್ರಾಸ್ತಾವಿಕ ಮಾತನಾಡಿದರು.
ಶಾಲಾ ಸಹ ಶಿಕ್ಷಕಿ ಶ್ರೀಮತಿ ಪ್ರಮೀಳಾ ಸ್ವಾಗತಿಸಿ, ಶ್ರೀಮತಿ ವಸಂತಮಾಲಾ ವಂದಿಸಿದರು. ಕು. ಪ್ರೇಮಲತಾ ಕಾರ್ಯಕ್ರಮವನ್ನು ನಿರೂಪಿಸಿದರು.