ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ಪ್ಲಾಸ್ಟಿಕ್ ನಿಷೇಧ ತಾಲೂಕು ವ್ಯಾಪ್ತಿಯಲ್ಲಿ ಕೈಗೊಳ್ಳಲು ನಿರ್ಣಯ

ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸೆ. 19 ರಂದು ನಡೆಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಭೆಗೆ ಬಂದ ಸುತ್ತೋಲೆ, ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದರು.

ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಕಂಡುಬಂದಲ್ಲಿ ಅದಕ್ಕೆ ದಂಡ ವಿಧಿಸುವ ಸೂಚನೆಗೆ ಸಭೆಯಲ್ಲಿ ವಿಚಾರ ಪ್ರಸ್ತಾಪವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿಗೆ ಬರುವುದನ್ನು ತಡೆಯುವ ಕಾರ್ಯ ಮೊದಲು ಆಗಬೇಕು, ಇದಕ್ಕೆ ತಾಲೂಕಿನಲ್ಲಿ ಪ್ಲಾಸ್ಟಿಕ್ ನಿಷೇಧ ಆದೇಶ ಮಾಡಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ಣಯ ಕೈಗೊಳ್ಳಲಾಯಿತು.

ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಗೆ ಹೊಸತಾಗಿ ಬಂದಿರುವ ಕಾನೂನಿನಿಂದ ಕೆಲಸ ಕೈಗೊಳ್ಳಲು ಅಸಾಧ್ಯ, ಇದನ್ನು ಪರಿಶೀಲಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಅ.2 ರಂದು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ, ಶ್ರೀಮತಿ ಗುಲಾಬಿ, ಪದ್ಮನಾಭ ಶೆಟ್ಟಿ, ಶ್ರೀಮತಿ ರೇವತಿ, ಶ್ರೀಮತಿ ಶಹಿನಾಜ್ ಅಬ್ದುಲ್ ರಹೀಂ, ಮಾಧವ ಮುಂಡಾಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here