ಕೊಡಗು- ದ.ಕ. ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

0

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ

ಕೊಡಗು- ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ 10ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 18ರಂದು ಬೆಂಗಳೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪಾಣತ್ತಲೆ ಪಳಂಗಪ್ಪ ಅಧ್ಯಕ್ಷತೆ ವಹಿಸಿದ್ದರು.

ಸಹಕಾರಿಯೂ 21 – 22ನೇ ಸಾಲಿನಲ್ಲಿ 30,20, 724 ರೂ.ಗಳ ನಿವ್ವಳ ಲಾಭಗಳಿಸಿದ್ದು ಷೇರುದಾರ ಸದಸ್ಯರಿಗೆ 11 ಶೇಕಡ ಡಿವಿಡೆಂಡ್ ಘೋಷಣೆ ಮಾಡಲಾಯಿತು. ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ ಶೇಕಡ 85ಕ್ಕಿಂತ ಹೆಚ್ಚಿನ ಅಂಕ ಪಡೆದ ಸದಸ್ಯರ ಮಕ್ಕಳನ್ನು ತಲಾ 4 ಸಾವಿರ ಮತ್ತು 5000, ಸಿಇಟಿ ಸಾಧಕರಿಗೆ ರೂ. 10,000 ಹಾಗೂ ನೀಟ್ ನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ರೂ. 15,000 ನಗದು ಪ್ರತಿಭಾ ಪುರಸ್ಕಾರ ನೀಡಲಾಯಿತು. ಹೀಗೆ 11 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ