ಸೆ. 25: ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಶತಮಾನೋತ್ಸವ ಪ್ರಯುಕ್ತ ಹಣ್ಣುಗಳ ಕೃಷಿ ಮಾಹಿತಿ

0
84

 

p>

 

ಸಂಪನ್ಮೂಲ ವ್ಯಕ್ತಿ ಅನಿಲ್ ಬಳಂಜ ಅವರಿಂದ ಕೃಷಿ ಮಾಹಿತಿ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಪ್ರಯುಕ್ತ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜಂಟಿ ಆಶ್ರಯದಲ್ಲಿ ಹಣ್ಣುಗಳ ಕೃಷಿ ಮಾಹಿತಿ ಕಾರ್ಯಕ್ರಮವು ಸೆ.25ರಂದು ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಲಿದೆ.
ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರು ಉಪಸ್ಥಿತರಿರಲಿದ್ದಾರೆ. ಸಂಪನ್ಮೂಲ ವ್ಯಕ್ತಿ ಅನಿಲ್ ಬಳಂಜ ಅವರು ಹಣ್ಣಗಳ ಕೃಷಿ ಕುರಿತು ಮಾಹಿತಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಸಹಕಾರಿ ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು, ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು ಹಾಗೂ ಕೃಷಿಕರು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here