ಸುಳ್ಯ ಪರಿವಾರಕಾನದ ಬಾಡಿಗೆ ಕೋಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ

0

 

ಆಲೆಟ್ಟಿ ಪಂಚಾಯತ್ ವ್ಯಾಪ್ತಿಯಪರಿವಾರಕಾನದಲ್ಲಿ ವಿವಾಹಿತ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಪರಿವಾರಕಾನದಲ್ಲಿರುವ ಅಜೀಝ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಕಳೆದ 5 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಕೊರಗಪ್ಪ ಭಂಡಾರಿ (54) ಎಂಬವರು ಕಳೆದ ರಾತ್ರಿ ಆತ್ಮ ಹತ್ಯೆ ಮಾಡಿಕೊಂಡಿರುತ್ತಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕೃತ್ಯ ವೆಸಗಿಕೊಂಡಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಮೂಲತಃ ಗುತ್ತಿಗಾರಿನವರೆನ್ನಲಾಗಿದ್ದು ಮೃತರು ಪತ್ನಿ ಹಾಗೂ ಓರ್ವ ಪುತ್ರ ,ಇಬ್ಬರು ಪುತ್ರಿಯನ್ನು ಹಾಗೂ ಬಂಧುಗಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here