ಸಂಪಾಜೆ : ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮ

0

 

ಸಂಪಾಜೆ ಗ್ರಾಮದ ಕಲ್ಲುಗುಂಡಿ. ಆರ್. ಎಮ್. ಎಸ್. ಎ. ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲೆ ವಿಭಾಗದ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆ ವಿಭಾಗದ ಅಧ್ಯಕ್ಷರಾದ ಹೊನ್ನಪ್ಪ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಮಾತನಾಡಿ ಈ ದಿನದ ಕಾರ್ಯಕ್ರಮದಲ್ಲಿ 9 ತಂಡಗಳು ಭಾಗವಹಿಸುತ್ತಿದ್ದು, ವಿವಿಧ ನಾಟಕ, ಸಂಸ್ಕೃತಿಕ ಕಾರ್ಯಕ್ರಮ ಸ್ಪರ್ಧೆ ನಡೆಯುತ್ತಿದ್ದು ನಮ್ಮ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಉತ್ತಮ ಪ್ರತಿಭೆಯನ್ನು ತೋರಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಆಗಲಿ. ಅಧ್ಯಾಪಕರು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ ಇನ್ನೂ ಹೆಚ್ಚಿನ ಕೆಲಸ ಆಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ರಜನಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ವಿವಿಧ ಸ್ಪರ್ಧೆಗಳಿಗೆ ತಾಲೂಕಿನ 9 ಪ್ರೌಢಶಾಲೆ ಗಳಿಂದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದಲ್ಲಿ ಕ್ಷೇತ ಶಿಕ್ಷಣ ಇಲಾಖೆಯ ಸಂಪನ್ಮೂಲ ಕೇಂದ್ರದ ಸಮನ್ವಯ ಅದಿಕಾರಿ ಶೀತಲ್ ಪ್ರಾಸ್ತಾವಿಕ ಮಾತನಾಡಿ ಶುಭ ಹಾರೈಕೆ ಮಾಡಿದರು. ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಶ್ರೀ. ಎಮ್. ಕೆ. ಸ್ವಾಗತಿಸಿದರು. ವೇದಿಕೆಯಲ್ಲಿ ಹಿರಿಯ ಪಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಾದ ಚಂದ್ರಾವತಿ ಸಿ. ಆರ್. ಪಿ. ಮಹೇಶ್ ಬಿ ಆರ್. ಪಿ. ರಮ್ಯಾ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮಧುಸೂದನ್, ಭಾಗವಹಿಸಿದರು. ಪ್ರೌಢಶಾಲೆ ಶಿಕ್ಷಕಿ ಪರಿಮಳ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ನೀಡಲಾಯಿತು.