ಐವರ್ನಾಡು : ಪೋಷಣ್ ಮಾಸಾಚರಣೆ ಅಭಿಯಾನ

0

 

ಮತ್ತು ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ

ಐವರ್ನಾಡು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಗ್ರಾಮ ಪಂಚಾಯತ್ ಐವರ್ನಾಡು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಐವರ್ನಾಡು,ಪಂಚಮುಖಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಐವರ್ನಾಡು ಇದರ ಸಹಯೋಗದೊಂದಿಗೆ ಮತ್ತು ಆರೋಗ್ಯ ಇಲಾಖೆಯ ಜಂಟಿ ಆಶ್ರಯದೊಂದಿಗೆ ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಹೆಣ್ಣುಶಿಶುಪ್ರದರ್ಶನ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಸೆ.02 ರಂದು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಮುಖಿ ಸ್ತ್ರೀಶಕ್ತಿ ಗೊಂಚಲಿ ಅಧ್ಯಕ್ಷರಾದ ಶ್ರೀಮತಿ ಸುಜಾತ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

 

ಅತಿಥಿಗಳಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ಶ್ರೀಮತಿ ಮಮತ, ಶ್ರೀಮತಿ ಚಂದ್ರಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವೀಣಾ ವೇದಿಕೆಯಲ್ಲಿ ಉಪಸ್ಥಿತರಿದ್ದು ಆರೋಗ್ಯ ಹಾಗೂ ಪೌಷ್ಟಿಕತೆಯ ಬಗ್ಗೆ ಮಾತನಾಡಿದರು. ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾರವರು ಪ್ರಾಸ್ತಾವಿಕ ಮಾತನಾಡಿದರು. ತಾಯಂದಿರಿಗೆ ಮತ್ತು ಸ್ತ್ರೀಶಕ್ತಿ ಗುಂಪಿನ ಸದಸ್ಯರಿಗೆ ಪೌಷ್ಟಿಕ ಆಹಾರ ತಯಾರಿಕ ಸ್ಪರ್ಧೆ ನಡೆದು ಬಹುಮಾನ ವಿತರಿಸಲಾಯಿತು. ಶಿಶು ಪ್ರದರ್ಶನಕ್ಕೆ ಬಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶ್ರೀಮತಿ ಆಶಾಮಡ್ತಿಲ ಸ್ವಾಗತಿಸಿ, ಕುಮಾರಿ ಪ್ರತಿಭಾ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರೋಹಿತಾಕ್ಷಿ ನಿರೂಪಿಸಿದರು. ಗ್ರಾಮದ ಎಲ್ಲಾ ಕಾರ್ಯಕರ್ತೆಯರು ಸಹಕರಿಸಿದರು.ಸ್ತ್ರೀಶಕ್ತಿಗುಂಪಿನ ಸದಸ್ಯರು, ಪೋಷಕರು, ಹಾಗೂ ಮಕ್ಕಳು ಭಾಗವಹಿಸಿದ್ದರು .