ಪಂಜ: ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ

0

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ತುಳಸಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಪಂಜ ಗ್ರಾಮ ಪಂಚಾಯತ್ ಪಂಜ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮಾತೃವಂದನ ಸಪ್ತಾಹ, ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮವು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಜ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆಯವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಕೆ.ಎಂ ದೀಪ ಬೆಳಗಿಸಿ ಉದ್ಘಾಟಿಸಿ ಪೋಷಣ ಮಾಸಾಚರಣೆ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಪ್ರಮೀಳಾ ಆರೋಗ್ಯ ಮತ್ತು ಪೌಷ್ಟಿಕಾಂಶದ ಬಗ್ಗೆ ಮಾಹಿತಿ ನೀಡಿದರು. ವೈದ್ಯಾಧಿಕಾರಿ ಡಾ|| ಮಂಜುನಾಥ ಗರ್ಭಿಣಿ ಮತ್ತು ಬಾಣಂತಿಯರ ಆರೈಕೆ ಬಗ್ಗೆ ಮಾಹಿತಿ ನೀಡಿದರು. ಪೌಷ್ಠಿಕ ಆಹಾರ ಸಪ್ತಾಹದ ಅಂಗವಾಗಿ ವಿವಿಧ ಸ್ಥಳೀಯವಾಗಿ ಲಭ್ಯವಿರುವ ವಿವಿಧ ತಿನಿಸುಗಳನ್ನು ತಯಾರಿಸಿದ ಅವರಿಗೆ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಹೆಣ್ಣು ಮಗು ಶಿಶು ಪ್ರದರ್ಶನ ಮತ್ತು ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ, ಮಗುವಿಗೆ ಅನ್ನ ಪ್ರಾಶನ ಮತ್ತು ಮಾತೃವಂದನಾ ಅರ್ಜಿ ಸ್ವೀಕರಿಸಲಾಯಿತು. ಕು. ಸಾನ್ವಿ ದೊಡ್ಡಮನೆ ಇವರಿಂದ ಯೋಗ ಪ್ರದರ್ಶನ ಮಾಡಲಾಯಿತು. ಇವರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ 70% ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಶಾಲು ಹೊದಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ , ವನಿತಾ ಸಮಾಜದ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್, ಗ್ರಾಮ ಪಂಚಾಯತು ಉಪಾಧ್ಯಕ್ಷೆ ನೇತ್ರಾವತಿ ಕಲ್ಲಾಜೆ, ಗೊಂಚಲಿನ ಅದ್ಯಕ್ಷೆ ಭಾಗೀರಥಿ, ಶಾಲಾ ಸಹಶಿಕ್ಷಕಿ ನೇತ್ರಾವತಿ ಉಪಸ್ಥಿತರಿದ್ದರು. ಲಿಖಿತಾ ಮತ್ತು ನಮಿತಾ ಪ್ರಾರ್ಥಿಸಿದರು. ವಲಯ ಮೇಲ್ವಚಾರಕಿ ಶ್ರೀಮತಿ ರವಿಶ್ರೀ.ಕೆ. ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಂದರ್ಶಕಿ ರಾಹೇಲಮ್ಮ, ಆರೋಗ್ಯ ಕಾರ್ಯಕರ್ತೆ ಪವಿತ್ರ ಮತ್ತು ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಬ್ಲಾಕ್ ಸೊಸೈಟಿ ಸದಸ್ಯರು, ಪೋಷಕರು, ಕಿಶೋರಿಯರು, ವನಿತಾ ಸಂಸ್ಥೆಯ ಸದಸ್ಯರು, ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಶ್ರೀ ಉಳ್ಳಾಕುಲ ಕಲಾರಂಗ ಪಲ್ಲೋಡಿಯ ಸದಸ್ಯರು ಹಾಜರಿದ್ದು ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ವಂದಿಸಿದರು. ವನಿತಾ ಸಮಾಜದ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ಕುದ್ವ ಕಾರ್ಯಕ್ರಮ ನಿರೂಪಿಸಿದರು.