ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ಪೋಷಕರ ಸಭೆ

0
195

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎ.ವಿ. ತೀರ್ಥರಾಮರಿಗೆ ಸನ್ಮಾನ

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ ಇಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಎ.ವಿ.ತೀರ್ಥರಾಮ, ನಿರ್ದೇಶಕರುಗಳಾದ ಕೆ.ಆರ್.ರಾಧಾಕೃಷ್ಣ ಶ್ರೀಕಟೀಲ್, ಮಹಾವೀರ್ ಜೈನ್, ಕೃಷ್ಣಯ್ಯ ಮೂಲೆತೋಟ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ತಳೂರು, ಮುಖ್ಯಶಿಕ್ಷಕ ಗದಾಧರ ಬಾಳುಗೋಡು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಶಾಲಾ ಸಂಚಾಲಕರೂ ಆಗಿರುವ ಎ.ವಿ. ತೀರ್ಥರಾಮರವರನ್ನು ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪರವಾಗಿ ಶಾಲು, ಹಾರ, ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ಶಾಲಾ ಮುಖ್ಯಶಿಕ್ಷಕ ಗದಾಧರ ಬಾಳುಗೋಡು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನಿಗಮದ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಶಾಲೆಗೆ ಆಗಮಿಸಿದ ಎ.ವಿ.ತೀರ್ಥರಾಮರವರನ್ನು ಶಾಲಾ ದ್ವಾರದ ಬಳಿ ಶಿಕ್ಷಕಿಯರು ಆರತಿ ಬೆಳಗಿ, ಶಿಕ್ಷಕರು ಹಾರಾರ್ಪಣೆಗೈದು, ಪುಷ್ಪಗುಚ್ಛ ನೀಡಿ ಗೌರವಿಸಿದರು. ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here