ರಕ್ಷಾ ಬಿ.ಎಚ್ ರವರಿಗೆ ಕರ್ನಾಟಕ ಚೇತನ ರಾಜ್ಯ ಪುರಸ್ಕಾರ

0

 

ಬೆಂಗಳೂರಿನ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ನೀಡುವ ಕರ್ನಾಟಕ ಚೇತನ ರಾಜ್ಯ ಪುರಸ್ಕಾರವನ್ನು ಕು. ರಕ್ಷಾ ಬಿ.ಎಚ್ ರವರು ಸೆ. 22 ರಂದು ಬೆಂಗಳೂರಿನಲ್ಲಿ ಸ್ವೀಕರಿಸಿದ್ದಾರೆ.

ಶಿಕ್ಷಣ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಕಲಾ ವೈಭವ 2022 ರ ನೆನಪಿನಲ್ಲಿ “ಕರ್ನಾಟಕ ಚೇತನ” ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಡಾ.ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಸ್ ಯಡಪಡಿತ್ತಾಯ, ಆರ್.ಎನ್.ಎಸ್ ಪದವಿಪೂರ್ವ ಕಾಲೇಜಿನ ಆಡಳಿತಾಧಿಕಾರಿ ಡಾ.ಸುಧೀರ್ ಪೈ ಕೆ.ಎಲ್, ಜ್ಞಾನ ಮಂದಾರ ಸಂಸ್ಥೆಯ ಸಂಸ್ಥಾಪಕ ಎಚ್.ಜೆ ಸೋಮಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಕ್ಷಾರವರು ಜ್ಞಾನ ಮಂದಾರ ಶಿಕ್ಷಕಿಯರ ತರಬೇತಿ ಕೇಂದ್ರದ ವಿದ್ಯಾರ್ಥಿನಿಯೂ ಆಗಿದ್ದು, ಪ್ರಸ್ತುತ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಾಳಿಲ ಗ್ರಾಮ ಪಂಚಾಯತ್ ಪಿಡಿಒ ಹೂವಪ್ಪ ಗೌಡ ಮತ್ತು ಲಕ್ಷ್ಮಿ ದಂಪತಿಗಳ ಪುತ್ರಿ.